ಕಲ್ಲಡ್ಕದಲ್ಲಿ ಕೆರೆಗೆ ಬಿದ್ದು ಬಾಲಕ ಸಾವು

 ಏಳುವರ್ಷದ ಬಾಲಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕ ಸಮೀಪದ ಉಮಾಶಿವ ಕ್ಷೇತ್ರ ದೇವಳದ ಸಮೀಪ ನಡೆದಿದೆ.

ನೇರಳಕಟ್ಟೆ ಭಗವತಿಕೋಡಿ ನಿವಾಸಿ, ಮಂಗಳೂರಿನ ಖಾಸಗಿ ವಿದ್ಯಾಸಂಸ್ಥೆಯ ಶಿಕ್ಷಕ ಸತ್ಯನಾರಾಯಣ ಎಂಬವರ ಪುತ್ರ ಶ್ರೀರಾಮ್(7) ಮೃತ ಬಾಲಕ.

ಉಮಾಶಿವ ಕ್ಷೇತ್ರದ ಸಭಾಂಗಣದಲ್ಲಿ ತನ್ನ ಅಜ್ಜನ ಶ್ರಾದ್ದಕ್ಕೆಂದು ಶ್ರೀರಾಮ್ ತನ್ನ ಮನೆಯವರ ಜೊತೆ ಬಂದಿದ್ದ ವೇಳೆ ದುರಂತ ಸಂಭವಿಸಿದೆ.

ಆಟವಾಡಲು ತನ್ನ ಸ್ನೇಹಿತನ ಜೊತೆ ಕ್ಷೇತ್ರದ ಕೆರೆಯ ಬಳಿಗೆ ತೆರಳಿದ್ದ ಈತ ಹಠಾತ್ತನೆ ಆಯತಪ್ಪಿ ಬಿದ್ದಿದ್ದಾನೆ. ಇದೇ ವೇಳೆ ಸ್ನೇಹಿತ ಓಡಿ ಬಂದು ಶ್ರೀರಾಮ್ ಕೆರೆಗೆ ಬಿದ್ದಿರುವ ವಿಚಾರ ತಿಳಿಸಿದ್ದಾನೆ. ತಕ್ಷಣ ಅಲ್ಲಿದ್ದವರು ಆತನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿಮಧ್ಯೆ ಮೃತಪಟ್ಟಿದ್ದಾನೆ.

ಶ್ರೀರಾಮ್ , ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ 2ನೇ ತರಗತಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ.

ಘಟನೆ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Be the first to comment on "ಕಲ್ಲಡ್ಕದಲ್ಲಿ ಕೆರೆಗೆ ಬಿದ್ದು ಬಾಲಕ ಸಾವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*