ಗಾಯಾಳು ಆಸ್ಪತ್ರೆಯಲ್ಲಿ ಮೃತ

 

ಗ್ಯಾಸ್ ಸಿಲಿಂಡರ್ ಅಳವಡಿಸುವ ಸಂದರ್ಭ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡು ಮೂರು ಮಂದಿ ಗಾಯಗೊಂಡ ಘಟನೆಯಲ್ಲಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಕರೋಪಾಡಿ ಗ್ರಾಮದ ಕಲಾಯಿ ಗುತ್ತು ನಿವಾಸಿ ರಾಮಯ್ಯ ಶೆಟ್ಟಿ (68) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪತ್ನಿ ಜಯಂತಿ ಶೆಟ್ಟಿ ಹಾಗೂ ಗ್ಯಾಸ್ ಹೊಸ ಸಿಲಿಂಡರ್ ಅಳವಡಿಸಲು ಬಂದ ರಿಕ್ಷಾ ಚಾಲಕ ರಮೇಶ್ ಗಂಬೀರ ಗಾಯಗೊಂಡವರು. ರಾಮಯ್ಯ ಬುಧವಾರ ನಿಧನರಾಗಿದ್ದಾರೆ. ಅವರು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಘಟನೆಯ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ.೨೫ರಂದು ಅಂಗಡಿಯಿಂದ ಹೊಸ ಸಿಲಿಂಡರ್ ತಂದಿದ್ದ ರಿಕ್ಷಾ ಚಾಲಕ ರಮೇಶ್ ಮನೆ ಮಂದಿ ಜತೆಗೆ ಅಳವಡಿಸಲು ಸಹಕರಿಸಿದ್ದಾರೆ. ಸಿಲಿಂಡರ್ ಅಳವಡಿಸಿ ಸ್ಟವ್ ಉರಿಸುವ ಸಮಯ ಏಕಾ ಏಕಿ ಬೆಂಕಿ ಹತ್ತಿಕೊಂಡಿದೆ. ಇದರಿಂದ ಮೂವರಿಗೆ ಗಂಭೀರ ಗಾಯವಾಗಿದ್ದು, ಮಂಗಳೂರು ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

 

Be the first to comment on "ಗಾಯಾಳು ಆಸ್ಪತ್ರೆಯಲ್ಲಿ ಮೃತ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*