ವಿಟ್ಲ ಪರಿಸರದಲ್ಲಿ ಮತ್ತೆ ಕಳ್ಳರ ಕಾಟ, ಉಕ್ಕುಡದಲ್ಲಿ ಲಕ್ಷಾಂತರ ಮೌಲ್ಯದ ಆಭರಣ ಕಳವು

www.bantwalnews.com

ವಿಟ್ಲ ಸಮೀಪದ ಮಂಗಲಪದವಿನಲ್ಲಿರುವ ಸಹಕಾರಿ ಸಂಸ್ಥೆಯೊಂದಕ್ಕೆ ಕಳ್ಳರು ನುಗ್ಗಿದ ಘಟನೆ ಹಸಿರಾಗಿರುವಂತೆಯೇ ಮತ್ತೊಂದು ಕಳವು ಕೃತ್ಯ ಬುಧವಾರ ತಡರಾತ್ರಿ ನಡೆದಿದೆ.

ಉಕ್ಕುಡದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಹಿಂಭಾಗದ ಗೋಡೆಯನ್ನು ತುಂಡರಿಸಿ ಬಾಗಿಲು ಮುರಿದು ಒಳನುಗ್ಗಿದ್ದ ಕಳ್ಳರು ಅಡಗಿಸಿಟ್ಟ ಸುಮಾರು 10.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈಯಲಾಗಿದೆ. ಘಟನೆ ಉಕ್ಕುಡ ಚೆಕ್ ಪೋಸ್ಟ್ ಸಮೀಪ ಬುಧವಾರ ತಡ ರಾತ್ರಿ ನಡೆದಿದೆ.

ಉಕ್ಕುಡ ನಿವಾಸಿ ಅಬ್ಬಾಸ್ ಹಾಜಿ ಅವರ ಮನೆಯಿಂದ ಕಳ್ಳತನ ನಡೆದಿದೆ.

ಮನೆ ಮಂದಿ ಬುಧವಾರ ಸಂಜೆ ಮನೆಗೆ ಬೀಗ ಹಾಕಿ ಕುಂಬ್ರದ ಸಂಬಂಧಿಕರಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿಂದ ರಾತ್ರಿ 12.30ಕ್ಕೆ ಮನೆಗೆ ಹಿಂದಿರುಗಿದ್ದು, ಮುಂಭಾಗದ ಬಾಗಿಲು ತೆಗೆದು ಒಳಹೋಗುತ್ತಿದ್ದಂತೆ ಕೃತ್ಯ ಬೆಳಕಿಗೆ ಬಂದಿದೆ.

ಹಿಂಬದಿಯ ಬಾಗಿಲು ತೆರೆದಿತ್ತು. ಕಪಾಟುಗಳನ್ನು ಜಾಲಾಡಿದ ಕಳ್ಳರು ಚಿನ್ನಾಭರಣ ಕದ್ದೊಯ್ದದ್ದು ಗಮನಕ್ಕೆ ಬಂದಿದೆ. ಹುಡುಕಾಟ ನಡೆಸಿದ ಬಳಿಕ ರಾತ್ರಿ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಬೆಳಗ್ಗೆ ತನಿಖೆ ಆರಂಭಿಸಿದರು. ಬೆಳಗ್ಗೆ ಬಂಟ್ವಾಳ ವೃತ್ತ ನಿರೀಕ್ಷಕ ಪ್ರಕಾಶ್ ಭೇಟಿ ನೀಡಿ, ಶ್ವಾನ ದಳ ಹಾಗೂ ಬೆಳಚ್ಚು ತಜ್ಞರನ್ನು ಕರೆಸಿ ತನಿಖೆ ಆರಂಭಿಸಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Be the first to comment on "ವಿಟ್ಲ ಪರಿಸರದಲ್ಲಿ ಮತ್ತೆ ಕಳ್ಳರ ಕಾಟ, ಉಕ್ಕುಡದಲ್ಲಿ ಲಕ್ಷಾಂತರ ಮೌಲ್ಯದ ಆಭರಣ ಕಳವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*