ಬಿ.ಸಿ.ರೋಡ್ – ಪುಂಜಾಲಕಟ್ಟೆ ರಸ್ತೆಗೆ 120 ಕೋಟಿ ರೂ ಮಂಜೂರು: ರೈ

www.bantwalnews.com


ಬಿ.ಸಿ.ರೋಡ್ ನಾರಾಯಣಗುರು ವೃತ್ತದಿಂದ ಪುಂಜಾಲಕಟ್ಟೆವರೆಗಿನ ರಸ್ತೆ ಅಭಿವೃದ್ಧಿಗೆ 120 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ಶೀಘ್ರ ಆರಂಭಿಸಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಬಿ.ಸಿ.ರೋಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಇಲಾಖೆ ಮೂಲಕ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಇದರಲ್ಲಿ ಬಿ.ಸಿ.ರೋಡ್ – ಜಕ್ರಿಬೆಟ್ಟುವರೆಗಿನ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಲಾಗುವುದು. ಜಕ್ರಿಬೆಟ್ಟುವಿನಿಂದ ಪುಂಜಾಲಕಟ್ಟೆವರೆಗಿನ ರಸ್ತೆ ಡಾಂಬರು ಹಾಕಲಾಗುವುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ಗೇರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಎಚ್.ಖಾದರ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭಾ ಸದಸ್ಯ ಪ್ರವೀಣ್ ಬಿ ಮೊದಲಾದವರು ಉಪಸ್ಥಿತರಿದ್ದರು.

1 Comment on "ಬಿ.ಸಿ.ರೋಡ್ – ಪುಂಜಾಲಕಟ್ಟೆ ರಸ್ತೆಗೆ 120 ಕೋಟಿ ರೂ ಮಂಜೂರು: ರೈ"

  1. ಮುಳ್ಳುಂಜ | December 20, 2017 at 6:31 pm | Reply

    ಬಂಟ್ವಾಳದಿಂದ ಪೂಂಜಾಲಕಟ್ಟೆಯವರೆಗೆ ಇರುವ ತಿರುವುಗಳನ್ನು ಕಡಿಮೆ ಮಾಡಿದರೆ ಬಹಳ ಉಪಯುಕ್ತ

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*