ಪ.ಗೋ ಪ್ರಶಸ್ತಿಗೆ ಪ್ರಶಾಂತ್ ಸುವರ್ಣ ಸಿದ್ಧಕಟ್ಟೆ ಆಯ್ಕೆ

ದ.ಕ.ಜಿಲ್ಲೆಯ ಪತ್ರಿಕೋದ್ಯಮದಲ್ಲಿ ಹೆಸರು ಮಾಡಿದ ಪದ್ಯಾಣ ಗೋಪಾಲಕೃಷ್ಣ (ಪ.ಗೋ.) ಅವರ ಹೆಸರಿನಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ (2017)ಗೆ ವಿಜಯವಾಣಿಯ ವರದಿಗಾರ ಪ್ರಶಾಂತ್ ಎಸ್. ಸುವರ್ಣ ಆಯ್ಕೆಯಾಗಿದ್ದಾರೆ.

2017ರ ಜೂನ್ 03ರಂದು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಕೇಳಿಸದೆ ನಮ್ಮ ಕರುಳಿನ ಕೂಗು? ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ.10,001,  ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಾಂತ್ ಸುವರ್ಣ ಅವರು ಬರೆದ ವರದಿ ಇದು.

Be the first to comment on "ಪ.ಗೋ ಪ್ರಶಸ್ತಿಗೆ ಪ್ರಶಾಂತ್ ಸುವರ್ಣ ಸಿದ್ಧಕಟ್ಟೆ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*