‘ಬುಡಾ’ ಕಚೇರಿ ಬಿ.ಸಿ.ರೋಡ್ ನಲ್ಲಿ ಕಾರ್ಯಾರಂಭ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಕಚೇರಿ ಇನ್ನು ಮುಂದೆ ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಪಕ್ಕ ಇರುವ ಪುರಸಭೆಯ ಕಟ್ಟಡದಲ್ಲಿ ಕಾರ್ಯಾಚರಿಸಲಿದೆ. ಈ ಮೂಲಕ ಬಂಟ್ವಾಳ, ಪಾಣೆಮಂಗಳೂರು, ಬಿ.ಸಿ.ರೋಡ್ ವ್ಯಾಪ್ತಿಯನ್ನೊಳಗೊಂಡ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಬಂಟ್ವಾಳ ಪುರಸಭೆಗೆ ಸಂಬಂಧಿಸಿದ ಕಚೇರಿಯೊಂದು ಬಿ.ಸಿ.ರೋಡಿನಲ್ಲಿ ಕಾರ್ಯಾಚರಿಸಿದಂತಾಗುತ್ತದೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೋಮವಾರ ನೂತನ ಕಚೇರಿ ಉದ್ಘಾಟಿಸಿದರು. ಈ ಸಂದರ್ಭ ವಿಧಾನಪರಿಷತ್ತು ಮುಖ್ಯ ಸಚೇತಕ ಐವನ್ ಡಿಸೋಜ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಪುರಸಭಾ ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುತ್ತೂರು ನಗರಾಭಿವೃದ್ಧಿ ಯೋಜನೆಯ ಅಧ್ಯಕ್ಷ ಪ್ರಶಾಂತ್ ಕೌಶಲ್ ಶೆಟ್ಟಿ, ಜಿಪಂ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಶಾಹುಲ್ ಹಮೀದ್, ಮಂಜುಳಾ ಮಾಧವ ಮಾವೆ, ಬುಡಾ ಸದಸ್ಯ ಕಾರ್ಯದರ್ಶಿ ಅಭಿಲಾಷ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಉಪಸ್ಥಿತರಿದ್ದರು. ಬಂಟ್ವಾಳ ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಬುಡಾ ಅಧ್ಯಕ್ಷ ಸದಾಶಿವ ಬಂಗೇರ ಪ್ರಾಸ್ತಾವಿಕ ಮಾತನಾಡಿದರು. ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ವಂದಿಸಿದರು. ಪತ್ರಕರ್ತ ಎ.ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನಾ ಸಮಾರಂಭದ ವರದಿ ಮತ್ತು ವಿಡಿಯೋ ಇಲ್ಲಿದೆ.

ರಮಾನಾಥ ರೈ ಹೇಳಿದ್ದು ಹೀಗೆ..

  • ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಲವು ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ.
  • ನಗರೋತ್ಥಾನ ಯೋಜನೆಯಡಿ ಹೆಚ್ಚುವರಿ 2 ಕೋಟಿ ರೂಪಾಯಿಗಳನ್ನು ಒದಗಿಸಲಾಗುವುದು, ಪುರಸಭೆಯ ವ್ಯಾಪ್ತಿಯ ಅಲ್ಪಸಂಖ್ಯಾತರ ಕಾಲೊನಿಗಳ ಮೂಲ ಅಭಿವೃದ್ಧಿಗೆ ಒಂದೂವರೆ ಕೋಟಿ ರೂ ಅನುದಾನ, 1 ಕೋಟಿ ರೂ ಎಸ್.ಸಿ, 1 ಕೋಟಿ ರೂ ಎಸ್.ಟಿ ಕಾಲೊನಿಗಳ ರಸ್ತೆ ಅಭಿವೃದ್ಧಿಗೆ ಅನುದಾನ ಹೀಗೆ ಹಲವು ಅಭಿವೃದ್ಧಿ ಕಾರ್ಯಗಳು ಪುರಸಭಾ ವ್ಯಾಪ್ತಿಯಲ್ಲಿ ನಡೆದಿವೆ.
  • ಬೆಳೆಯುತ್ತಿರುವ ಬಂಟ್ವಾಳಕ್ಕೆ ಸಹಾಯಕ ಕಮೀಷನರ್ ಕಚೇರಿ ಒದಗಿಸಲಾಗುವ ಕುರಿತು ಪ್ರಯತ್ನಗಳು ಸಾಗಿವೆ  ಈಗಾಗಲೇ ಖಾಸಗಿ ಬಸ್ ನಿಲ್ದಾಣದ ಬೇಡಿಕೆಯನ್ನು ಈಡೇರಿಸಲಾಗಿದೆ. ಸಂಚಾರಿ ಪೊಲೀಸ್ ಠಾಣೆ, ಆರ್.ಟಿ.ಒ., ದೇವರಾಜ ಅರಸು ಭವನಕ್ಕೆ ಜಾಗದ ಸಮಸ್ಯೆ ಇದ್ದು, ಅದಕ್ಕೆ ಸೂಕ್ತ ಜಾಗ ಕಲ್ಪಸಲಾಗುವುದು .3  ಕೋಟಿ ರೂ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗುತ್ತಿದೆ. ಖ್ಯಾತ ಕವಿ ಪಂಜೆ ಮಂಗೇಶರಾಯ ಭವನ ಅವರು ಹುಟ್ಟಿದ ಮನೆ ಪಕ್ಕದಲ್ಲೇ ನಿರ್ಮಾಣವಾಗುತ್ತಿದ್ದು, ಅವರ ಆತ್ಮಕ್ಕೆ ಸಂತೋಷ ಆಗುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದ ರೈ, ಬೆಂಜನಪದವಿನಲ್ಲಿ 10 ಕೋಟಿ ರೂ ಕ್ರೀಡಾಂಗಣಕ್ಕೆ ಎಲ್ಲ ರೀತಿಯ ಅನುಮೋದನೆ ಸಿಕ್ಕಿ ಅದರ ಶಂಕುಸ್ಥಾಪನೆ ಮಂಗಳವಾರ ಮಾಡಲಿದ್ದೇವೆ. 15ರಂದು ಅಲ್ಪಸಂಖ್ಯಾತರ ಹೆಣ್ಣುಮಕ್ಕಳಿಗೆ ಹಾಸ್ಟೆಲ್ ಅಧಿಕೃತ ಉದ್ಘಾಟನೆ ನಡೆಯಲಿದೆ.
  • ಟೀಕಾಕಾರರು ಏನು ಹೇಳಿದರೂ ಅದಕ್ಕೆ ಉತ್ತರ ನೀಡುವ ರೀತಿಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ . ಹಿಂದೆ ಬಂಟ್ವಾಳದ ಮುಕ್ಕಾಲು ಭಾಗ ಬಂಟ್ವಾಳ ಕ್ಷೇತ್ರದಲ್ಲಿದ್ದರೆ ಕಾಲು ಭಾಗ ವಿಟ್ಲ ಕ್ಷೇತ್ರದಲ್ಲಿತ್ತು. ತಾಲೂಕು ಕೇಂದ್ರವಾದ ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಹುತೇಕ ಭಾಗ ವಿಟ್ಲ ಕ್ಷೇತ್ರಕ್ಕೆ ಒಳಪಡುತ್ತಿತ್ತು. ವಿಟ್ಲ ಕ್ಷೇತ್ರದ ಈ ಭಾಗಗಳು ನನ್ನ ಎರಡು ಅವಧಿಯ ಕಾಲಕ್ಕೆ ಬಂದವುಗಳು. ಕ್ಷೇತ್ರ ಪುನರ್ವಿಂಗಡಣೆ ಆದಾಗ ತಾಲೂಕು ಅಭಿವೃದ್ಧಿ ಮಾಡುವ ನನ್ನ ಕೆಲಸಕ್ಕೆ ಸಹಕಾರಿಯಾಗಿದೆ

26 ಲಕ್ಷ ರೂ ವೆಚ್ಚ: ಸದಾಶಿವ ಬಂಗೇರ ಪ್ರಾಸ್ತಾವಿಕ ಮಾತು…
ಬಂಟ್ವಾಳದಲ್ಲಿ ವಾಹನ ನಿಬಿಡತೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಳೆದ 2009ರಿಂದ ಪುರಸಭಾ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬುಡಾ ಕಚೇರಿಯನ್ನು ಮಿನಿ ವಿಧಾನಸೌಧ ಮುಂಭಾಗದಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸುಮಾರು 26 ಲಕ್ಷ ರೂ. ವೆಚ್ಚದಲ್ಲಿ ನೂತನ ಕಚೇರಿ ನಿರ್ಮಿಸಲಾಗಿದೆ

ಅಪಪ್ರಚಾರಕ್ಕೆ ಬೇಸರಗೊಳ್ಳಬೇಡಿ, ಅಭಿವೃದ್ಧಿ ಕಾರ್ಯಗಳೇ ಅದಕ್ಕೆ ಉತ್ತರ ಎಂದು ವಿಧಾನಪರಿಷತ್ತು ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದರು. ಸಮಾರಂಭದಲ್ಲಿ ಕಟ್ಟಡ ಕಾಮಗಾರಿಯ ಗುತ್ತಿಗೆದಾರ ಓಝೋಲ್ಡ್ ಗೋವಿಯಸ್ ಅವರನ್ನು ಸನ್ಮಾನಿಸಲಾಯಿತು.

ವಿಡಿಯೋ ಲಿಂಕ್ ಇಲ್ಲಿದೆ..

Be the first to comment on "‘ಬುಡಾ’ ಕಚೇರಿ ಬಿ.ಸಿ.ರೋಡ್ ನಲ್ಲಿ ಕಾರ್ಯಾರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*