19ರಂದು ರೈ ನಾಮಪತ್ರ ಸಲ್ಲಿಕೆ, ಬಳಿಕ ಕಾರ್ಯಕರ್ತರ ಸಭೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರು ಏ.19 ರಂದು ಬೆಳಿಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಂಟ್ವಾಳ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಬೊಳ್ಳಾಯಿ ತಿಳಿಸಿದ್ದಾರೆ.

ಜಾಹೀರಾತು

ಬಿ.ಸಿ.ರೋಡಿನಲ್ಲಿರುವ ಕಾಂಗ್ರೆಸ್ ಚುನಾವಣಾ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಕಾರ್ಯಾಲಯದಿಂದ ಮೆರವಣಿಗೆಯಲ್ಲಿ ತೆರಳಿ ಮಿನಿವಿಧಾನಸೌಧದಲ್ಲಿ  ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬಳಿಕ ಚುನಾವಣಾ ಪ್ರಚಾರ ಕಚೇರಿ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ ಎಂದರು.

1200 ಕೋಟಿ  ರೂ. ಅಭಿವೃದ್ಧಿ ಕಾರ್ಯ:

ಬಂಟ್ವಾಳ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿರುವುದು ಜನರು ಅವರ ಮೇಲಿಟ್ಟ ಪ್ರೀತಿ,ವಿಶ್ವಾಸಗಳಿಗೆ ಸಾಕ್ಷಿಯಾಗಿದೆ ಎಂದು ಹೇಳಿದ ಅವರು ಕಳೆದ ಅವಧಿಯಲ್ಲಿ 1200 ಕೋ.ರೂ.ಗಳ ಅಭಿವೃದ್ದಿ ಕಾರ್ಯಗಳು ನಡೆದಿವೆ ಎಂದರು.  ಬಂಟ್ವಾಳ ಮಾತ್ರವಲ್ಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಇಡೀ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಿದ್ದಾರೆ ಎಂದ ಅವರು, ಜಾತಿ, ಧರ್ಮ, ಮತ,ಬೇಧವಿಲ್ಲದೆ ಎಲ್ಲರನ್ನು ಸಮಾನಾಗಿ ಕಂಡಿರುವ ರಮಾನಾಥ ರೈ ಅವರ ಗೆಲುವು ನಿಶ್ಚಿತ ಎಂದರು.

ಜಾಹೀರಾತು

ಸುದ್ದಿಗೋಷ್ಠಿಯಲ್ಲಿ   ಬಂಟ್ವಾಳ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,  ಮಂಜುಳಾ ಮಾಧವ ಮಾವೆ, ಪಕ್ಷ ಪ್ರಮುಖರಾದ ಬಿ.ಎಚ್.ಖಾದರ್, ಕೆ.ಪದ್ಮನಾಭ ರೈ, ಚಂದ್ರಶೇಖರ ಪೂಜಾರಿ, ಬೇಬಿ ಕುಂದರ್, ಬಿ.ಕೆ.ಇದ್ದಿನಬ್ಬ, ಪಿ.ರಾಮಕೃಷ್ಣ ಆಳ್ವ, ಪರಮೇಶ್ವರ ಮೂಲ್ಯ, ಮಧುಸೂಧನ ಶೆಣೈ, ಬಾಲಕೃಷ್ಣ ಆಳ್ವ ಕೊಡಾಜೆ, ಜಗದೀಶ ಕೊಯ್ಲ, ಜಯಂತಿ ಪೂಜಾರಿ, ಜೋಸ್ಫಿನ್ ಡಿಸೋಜ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "19ರಂದು ರೈ ನಾಮಪತ್ರ ಸಲ್ಲಿಕೆ, ಬಳಿಕ ಕಾರ್ಯಕರ್ತರ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*