ತಾನು ಕಲಿತು ಇತರರಿಗೂ ಮಾರ್ಗದರ್ಶಕರಾದ ಶಿವಪ್ಪ

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಮಧುಕರ ಸಭಾಂಗಣದಲ್ಲಿ ಆರೆಸ್ಸೆಸ್ ಕಾರ್ಯಕರ್ತ, ಕೇಂದ್ರದ ಉದ್ಯೋಗಿ ಕೊ. ಶಿವಪ್ಪ ಅವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಶಿವಪ್ಪ ಅವರು ತಾನು ಕಲಿತು ಇತರರಿಗೂ ಮಾರ್ಗದರ್ಶಿಯಾದರು ಎಂದು ಸ್ಮರಿಸಿದರು.

ಸಮಾಜಮುಖಿಯಾಗಿ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕಾಗಿ ತನ್ನ ಜೀವನವನ್ನು ಸಮರ್ಪಿಸಿಕೊಂಡು, ರಾಷ್ಟ್ರಿಯ ಸ್ವಯಂಸೇವಕ ಸಂಘ, ಶ್ರೀರಾಮ ವಿದ್ಯಾಕೇಂದ್ರ ಹಾಗೂ ಹಿಂದೂ ಸಮಾಜಕ್ಕೋಸ್ಕರ ಸಮರ್ಪಣಾ ಭಾವದಿಂದ ತನ್ನ ಜೀವನವನ್ನೇ ಶ್ರೇಷ್ಟತೆ ಕಡೆಗೆ ತೆಗೆದುಕೊಂಡು ಸಾಗಿದ್ದಾರೆ ಎಂದು ಅವರು ಹೇಳಿದರು.

ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ವಿಟ್ಲ ಸಂಘಚಾಲಕರಾದ ವೆಂಕಟೇಶ ಅಮೈ, ನೋಣಯ್ಯ, ವಿದ್ಯಾಕೇಂದ್ರದ ಅಧ್ಯಕ್ಷರು ನಾರಾಯಣ ಸೋಮಯಾಜಿ ಉಪಸ್ಥಿತರಿದ್ದರು.

ಗಾಯತ್ರಿ ವೈಯಕ್ತಿಕ ಗೀತೆಯನ್ನು ಹಾಡಿದರು, ವಿನೋದ್ ಕಾರ್ಯಕ್ರಮ ನಿರ್ವಹಿಸಿದರು.

Be the first to comment on "ತಾನು ಕಲಿತು ಇತರರಿಗೂ ಮಾರ್ಗದರ್ಶಕರಾದ ಶಿವಪ್ಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*