ಬಡ್ಡಕಟ್ಟೆ – ಹೊಸಮಾರು ಸಂಪರ್ಕಕ್ಕೆ ಕಿರುಸೇತುವೆ

ಕಳೆದ ಜೂನ್ ತಿಂಗಳ 18 ರಂದು ಸುರಿದ ಭಾರೀ ಮಳೆಗೆ ಮುರಿದು ಬಿದ್ದಿದ್ದ ಬಂಟ್ವಾಳ ಪುರಸಭಾ ವ್ಯಾಪ್ತಿಯ 5ನೇ ವಾರ್ಡ್‌ನ ಬಡ್ಡಕಟ್ಟೆ-ಹೊಸಮಾರು ಸಂಪರ್ಕಿಸುವ ಕಿರು ಸೇತುವೆಗೆ ಪರ್ಯಾಯವಾಗಿ ಬಂಟ್ವಾಳ ಪುರಸಭೆ ತಾತ್ಕಾಲಿಕ ಸೇತುವೆ ನಿರ್ಮಿಸಿದೆ.

55 ಸಾವಿರ ರೂ ವೆಚ್ಚದಲ್ಲಿ 24 ಅಡಿ ಉದ್ದದ ಸೇತುವೆ ನಿರ್ಮಿಸಲಾಗಿದ್ದು, ತಾತ್ಕಾಲಿಕ ಕಿರು ಸೇತುವೆ ನಿರ್ಮಾಣದಿಂದ ಇದೇ ರಸ್ತೆಯನ್ನೇ ಅವಲಂಬಿಸಿದ್ದ ನೂರಾರು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಬೀಡಿ ಕಾರ್ಮಿಕರಿಗೆ ಅನುಕೂಲವಾಗಿತ್ತು. ಸೋಮವಾರ ಈ ಕಿರುಸೇತುವೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ  ಅವಕಾಶ ನೀಡಲಾಯಿತು. ಸ್ಥಳೀಯ ಪುರಸಭಾ ಸದಸ್ಯ ಪ್ರವೀಣ್ ಬಿ.,  ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೊ, ಸ್ಥಳೀಯರಾದ ಜನಾರ್ಧನ ಕುಲಾಲ್, ಸೋಮಪ್ಪ ಪೂಜಾರಿ, ಪದ್ಮನಾಭ ಸಾಲಿಯಾನ್, ಬೇಬಿ ಹೊಸ್ಮಾರು, ಲೋಲಾಕ್ಷಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

Be the first to comment on "ಬಡ್ಡಕಟ್ಟೆ – ಹೊಸಮಾರು ಸಂಪರ್ಕಕ್ಕೆ ಕಿರುಸೇತುವೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*