ಸಂಚಯಗಿರಿ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಸಮರ್ಪಕವಾಗಿ ನಿರ್ವಹಿಸುವ ಬಗ್ಗೆ ಪುರಸಭೆಯಿಂದ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಚಯಗಿರಿ ಪ್ರದೇಶದಲ್ಲಿ ನಾಗರಿಕ ಕ್ರಿಯಾ ಸಮಿತಿಯವರ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮೊದಲಿಗೆ ಅರಿವು ನೀಡುವ ಕಾರ್ಯಕ್ರಮವನ್ನು ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಪೀಠದಲ್ಲಿ ಆಯೋಜಿಸಲಾಯಿತು. ಅಧ್ಯಕ್ಷತೆಯನ್ನು ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ವಹಿಸಿ ಪುರಸಭೆ ವ್ಯಾಪ್ತಿಯಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧಗೊಳಿಸುವ ಯೋಜನೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಸಂಘಸಂಸ್ಥೆಗಳು ಸಹಕರಿಸಬೇಕೆಂದು ಕೇಳಿಕೊಂಡರು.

ಬಂಟ್ವಾಳ ಪುರಸಭೆಯ ಸಮುದಾಯ ಸಂಘಟನಾಧಿಕಾರಿ ಮತ್ತಡಿ ಮುಖ್ಯ ಅತಿಥಿಯಾಗಿ ಮಾತನಾಡಿ ಬಂಟ್ವಾಳ ನಗರವನ್ನು ಸ್ವಚ್ಛತೆಯಲ್ಲಿ ಮಾದರಿ ನಗರವನ್ನಾಗಿಸುವುದಕ್ಕೆ ಪ್ರಜ್ಞಾವಂತ ನಾಗರಿಕರ ಸಹಕಾರ ಅಗತ್ಯವಿದೆ ಎಂದು ಹೇಳಿದರು. ಸಂಚಯಗಿರಿ ಕ್ರಿಯಾ ಸಮಿತಿ ಅಧ್ಯಕ್ಷ ಪ್ರಶಾಂತ್ ಕೋಟ್ಯಾನ್ ಉಪಸ್ಥಿತರಿದ್ದರು.

ರಾಣಿ ಅಬ್ಬಕ್ಕ ತುಳು ಅಧ್ಯಯನ ಪೀಠದ ಅಧ್ಯಕ್ಷ, ಬಂಟ್ವಾಳ ಪುರಸಭೆಯ ಸ್ವಚ್ಛತಾ ರಾಯಭಾರಿಯಾಗಿರುವ ಪ್ರೊ. ತುಕರಾಮ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಗಿ ಸ್ವಾಗತಿಸಿದರು. ದಾಮೋದರ ಸಂಚಯಗಿರಿ ವಂದಿಸಿದರು. ಪ್ರದೀಪ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸ್ವಚ್ಛತಾ ಕಾರ್ಯವನ್ನು ನಿರ್ವಹಿಸಲಾಯಿತು.

1 Comment on "ಸಂಚಯಗಿರಿ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ರಮ"

  1. Rajamani ramakunja | September 27, 2018 at 10:49 pm | Reply

    ನಿಜಕ್ಕೂ ಆಶ್ಚರ್ಯವೆನಿಸುತ್ತೆ!,ಪುರಸಭಾ ವ್ಯಾಪ್ತಿಯಲ್ಲಿ ಎಷ್ಟೋ ಕಡೆ ತ್ಯಾಜ್ಯದಿಂದ ನಾರುವ ಪ್ರದೇಶಗಳಿರುವಾಗ, ಅದೆಲ್ಲವನ್ನೂ ಬಿಟ್ಟು, ಸ್ವಚ್ಛತೆಯನ್ನು ಸಂಪೂರ್ಣವಾಗಿ ಕಾಪಾಡಿಕೊಂಡುಬಂದಿರುವ ಸಂಚಯಗಿರಿಯಲ್ಲಿ ರಸ್ತೆಯನ್ನು ಗುಡಿಸಬೇಕಿತ್ತೆ? ಈಯೆಲ್ಲ ಕಣ್ಕಟ್ಟು ಯಾಕೆ? ಪೇಪರಿನಲ್ಲಿ ಫೊಟೊ ಬಂದರೆ ಸಾಕಾಗುವುದಿಲ್ಲ, ಅದು ಕಡತಕ್ಕೆ ಮಾತ್ರ ಸೀಮಿತವಾಗುತ್ತೆ. ಸ್ವಚ್ಛತೆಯ ಕುರಿತು ನೈಜ ಕಾಳಜಿ ಇದ್ದಲ್ಲಿ ತ್ಯಾಜ್ಯ ತುಂಬಿರುವ ಪ್ರದೇಶಕ್ಕೆ ಹೋಗಿ ಸ್ವಚ್ಛಗೊಳಿಸಲಿ.ಅದು ಆದರ್ಶ ಮತ್ತು ಪ್ರಶಂಸನೀಯ.

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*