ವಿವೇಕಾನಂದ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗಮೇಳಕ್ಕೆ ಸಿದ್ಧತೆ

  • 300ಕ್ಕೂ ಅಧಿಕ ಕಂಪೆನಿಗಳ ಸಂಪರ್ಕ ; ನೋಂದಾವಣೆ ಆರಂಭ

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘವು ಇದೇ ಪ್ರಥಮ ಬಾರಿಗೆ ನೆಹರು ನಗರದ ತನ್ನ ವಿಶಾಲ ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳವೊಂದನ್ನು ಆಯೋಜಿಸುತ್ತಿದೆ. ಗ್ರಾಮೀಣ ಪ್ರದೇಶದ ಯುವ ಸಮೂಹ ಎದುರಿಸುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ಲಕ್ಷದಲ್ಲಿರಿಸಿ ಈ ಉದ್ಯೋಗ ಮೇಳವನ್ನು ರೂಪಿಸಲಾಗಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಮೂಲ ಆಶಯವಾದ ಗ್ರಾಮಾಭಿವೃದ್ಧಿಯ ಕನಸು ಈ ಉದ್ಯೋಗಮೇಳದ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈಗಾಗಲೇ ಈ ಶಿಕ್ಷಣ ಕೇಂದ್ರ ವಿವಿಧ ಗ್ರಾಮಗಳನ್ನು ದತ್ತು ತೆಗೆದುಕೊಂಡು ಅಲ್ಲಿನ ಸಮಗ್ರ ಅಭ್ಯುದಯಕ್ಕೆ ಪಣ ತೊಟ್ಟು ಕಾರ್ಯಪ್ರವೃತ್ತವಾಗಿದೆ. ಅದರ ಮುಂದುವರೆದ ಭಾಗವಾಗಿ, ಉದ್ಯೋಗ ಕ್ಷೇತ್ರದ ಬಗೆಗೆ ಸರಿಯಾದ ಮಾಹಿತಿ, ಜ್ಞಾನ ದೊರಕದೆ ಉದ್ಯೋಗಹೀನರಾಗಿ ಗ್ರಾಮಗಳಲ್ಲುಳಿದ ಯುವ ಸಮೂಹವನ್ನು ಗಮನದಲ್ಲಿರಿಸಿ ಈ ಮೇಳ ಆಯೋಜಿತವಾಗಿದೆ.

unnamed-1

2017ರ ಜನವರಿ 13ರಂದು ಈ ಉದ್ಯೋಗಮೇಳ ಆಯೋಜನೆಗೊಳ್ಳುತ್ತಿದ್ದು, ಸುಮಾರು ಮುನ್ನೂರಕ್ಕೂ ಅಧಿಕ ಕಂಪೆನಿಗಳನ್ನು ಸಂಪರ್ಕಿಸಲಾಗಿದೆ. ರಾಜ್ಯ ಹಾಗೂ ಹೊರರಾಜ್ಯದ ಅನೇಕ ಸಂಸ್ಥೆಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಿ ಈ ಭಾಗದ ಯುವಕ ಯುವತಿಯರಿಗೆ ಉದ್ಯೋಗ ಕೊಡುವುದಕ್ಕೆ ಉತ್ಸಾಹ ತೋರಿವೆ. ಮಾಹಿತಿ ತಂತ್ರಜ್ಞಾನ, ರಿಯಲ್ ಎಸ್ಟೇಟ್, ಬ್ಯಾಂಕಿಂಗ್, ರಿಟೇಲ್ ಕ್ಷೇತ್ರದ ಉದ್ಯಮ, ಉತ್ಪಾದನ ಘಟಕಗಳೇ ಮೊದಲಾದ ಅನೇಕ ಉದ್ಯಮಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಲಿವೆ.

ಜಾಹೀರಾತು

ಯಾರು ಭಾಗವಹಿಸಬಹುದು?

ಪ್ರಾಥಮಿಕ, ಪ್ರೌಢಶಾಲಾ ಮಟ್ಟದಿಂದ ತೊಡಗಿ ಪಾರಂಪರಿಕ ಪದವಿಗಳಾದ ಬಿ.ಎ, ಬಿ.ಎಸ್ಸಿ, ಬಿ.ಕಾಂ ಮುಂತಾದ ಪದವೀಧರರು, ಐಟಿಐ, ಡಿಪ್ಲಮೋದಂತಹ ವಿಷಯ ವೃತ್ತಿ ಶಿಕ್ಷಣ ಪಡೆದವರು, ಇಂಜಿನಿಯರಿಂಗ್, ಎಂ.ಬಿ.ಎ ಮೊದಲಾದ ವೃತ್ತಿಪರ ಶಿಕ್ಷಣ ಹೊಂದಿದವರು, ಹೀಗೆ ಇನ್ನೂ ಹಲವಾರು ವಿಷಯಗಳಲ್ಲಿ ಪ್ರಶಿಕ್ಷಿತರೂ ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ರಾಜ್ಯದ ಯಾವುದೇ ಭಾಗದ ಉದ್ಯೋಗಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು.

ಏನು ಮಾಡಬೇಕು?

ಜಾಹೀರಾತು

ಈಗಾಗಲೇ ಈ ಉದ್ಯೋಗ ಮೇಳದ ಹಿನ್ನಲೆಯಲ್ಲಿ ವೆಬ್ ಸೈಟ್ ಒಂದನ್ನು ರೂಪಿಸಲಾಗಿದೆ. ಆ ವೆಬ್ ಸೈಟ್‌ನಲ್ಲಿರುವ ಅರ್ಜಿಯನ್ನು ತುಂಬಿ ಭಾಗವಹಿಸುವ ಉಮೇದುಗಾರಿಕೆಯನ್ನು ನೋಂದಾವಣೆ ಮಾಡಬೇಕು. ವೆಬ್ ಸೈಟ್ ವಿಳಾಸ: www.vivekaudyoga.com ವೆಬ್‌ಸೈಟ್‌ನಲ್ಲಿ ದಾಖಲೆ ಮಾಡಲು ಸಾಧ್ಯವಾಗದವರು ನೆಹರುನಗರದ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ರೂಪಿಸಲಾಗಿರುವ ಉದ್ಯೋಗ ಮೇಳದ ಮಾಹಿತಿ ಕೇಂದ್ರಕ್ಕೆ ನೇರವಾಗಿ ಆಗಮಿಸಿ ಅಥವಾ 8105650443 ಈ ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾವಣೆ ಮಾಡಿಕೊಳ್ಳಬಹುದು. ತಮ್ಮ ಹೆಸರನ್ನು ದಾಖಲೆ ಮಾಡಿಕೊಂಡವರಿಗೆ ಕೆಲವು ದಿನಗಳ ಅನಂತರ ಉದ್ಯೋಗ ಮೇಳಕ್ಕೆ ಆಗಮಿಸುವಾಗಿನ ಸಿದ್ಧತೆಯ ಬಗೆಗೆ ಸೂಕ್ತ ಮಾಹಿತಿ ನೀಡಲಾಗುತ್ತದೆ. ಈ ಮಾಹಿತಿ ಕೇಂದ್ರ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ತೆರೆದಿರುತ್ತದೆ ಎಂದು ಉದ್ಯೋಗ ಮೇಳ ಸಮಿತಿಯ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರ ಜಾಲತಾಣಕ್ಕೆ ಚಾಲನೆ ನೀಡಲಾಯಿತು. ಆಡಳಿತ ಸಮಿತಿ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್, ಪ್ರಮುಖರಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್, ಎಸ್.ಆರ್.ರಂಗಮೂರ್ತಿ ಮೊದಲಾದವರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿವೇಕಾನಂದ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗಮೇಳಕ್ಕೆ ಸಿದ್ಧತೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*