ಎಸ್ ಡಿ ಪಿ ಐ ನಿಂದ ಮೌನ ಮೆರವಣಿಗೆ, ಸಭೆ

ಬಂಟ್ವಾಳ: ಬಾಬರಿ ಮಸ್ಜಿದ್ ಧ್ವಂಸವನ್ನು ಖಂಡಿಸಿ, ಮಸ್ಜಿದನ್ನು ಪುನರ್ ನಿರ್ಮಿಸಬೇಕೆಂದು ಆಗ್ರಹಿಸಿ ಎಸ್.ಡಿ.ಪಿ.ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಮುಖಕ್ಕೆ ಕಪ್ಪು ಪಟ್ಟಿ  ಕಟ್ಟಿ, ಕೈಕಂಬದಿಂದ ಅಲಖಝಾನ ಹಾಲ್ ವರೆಗೆ ಮೌನ ರ್ಯಾಲಿ ನಡೆದು ಅಲ್ ಖಝಾನ ಹಾಲ್ ನಲ್ಲಿ ಸೆಮಿನಾರ್ ನಡೆಯಿತು.

monish

ಎಸ್.ಡಿ ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರ್, ಮಾತನಾಡಿ ಕಳೆದ 25 ವರ್ಷದಲ್ಲಿ ಈ ದೇಶದ ಜಾತ್ಯಾತೀತ ಮನಸ್ಸುಗಳು ಬಾಬರಿ ಮಸ್ಜಿದ್ ಧ್ವಂಸದ ನ್ಯಾಯದ ನಿರೀಕ್ಷೆಯಲ್ಲಿ ವರ್ಷಂಪ್ರತಿ ಡಿ. 6 ನ್ನು ಕರಾಳ ದಿನವನ್ನಾಗಿ ಆಚರಿಸುತ್ತಾ ನ್ಯಾಯಕ್ಕಾಗಿ ಆಗ್ರಹಿಸುತ್ತಾ ಬಂದಿದೆ ಎಂದರು.

ಜಾಹೀರಾತು

monish2ರಾಜ್ಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ ಮಾತನಾಡಿದರು.ಎಸ್.ಡಿ.ಪಿ.ಐ ಬಂಟ್ವಾಳ ವಿಧಾನಸಭಾ ಅಧ್ಯಕ್ಷ ಶಾಹುಲ್ ಎಸ್.ಎಚ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವಾಝ್ ಉಳ್ಳಾಲ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ, ಪಿ.ಎಫ್.ಐ ರಾಜ್ಯ ಸಮಿತಿ ಸದಸ್ಯ ಇಕ್ಬಾಲ್ ನಂದರಬೆಟ್ಟು, ತಲಪಾಡಿ ಜುಮ್ಮಾ ಮಸ್ಜಿದ್ ಅಧ್ಯಕ್ಷ ಇದ್ದಿನಬ್ಬ , ಅಕ್ಕರಂಗಡಿ ಜುಮ್ಮಾ ಮಸ್ಜಿದ್ ಅಧ್ಯಕ್ಷ ಹಮೀದ್, ಪರ್ಲಿಯಾ ಜುಮಾ ಮಸ್ಜಿದ್ ಅಧ್ಯಕ್ಷ ಶಾಕಿರ್ , ಬಂಟ್ವಾಳ ಪುರಸಭೆ ಸದಸ್ಯ ಮೋನಿಶ್ ಅಲಿ, ಪುದು ಗ್ರಾಮ ಪಂಚಾಯತ್ ಸದಸ್ಯ ಸುಲೈಮಾನ್ ಮುಸ್ಲಿಯಾರ್ ಉಪಸ್ಥಿತರಿದ್ದರು.

monish3

 ತಹಶಿಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಮನವಿ ನೀಡಲಾಯಿತು. ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಇಸ್ಮಾಯಿಲ್ ಬಾವ ಸ್ವಾಗತಿಸಿದರು. ಸತ್ತಾರ್ ಕಲ್ಲಡ್ಕ ವಂದಿಸಿದರು. ಮುಹಮ್ಮದ್ ರಿಯಾಝ್ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಎಸ್ ಡಿ ಪಿ ಐ ನಿಂದ ಮೌನ ಮೆರವಣಿಗೆ, ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*