ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ವಿರೋಧಿಸಿ ಹಿಂದು ಸಂಘಟನೆಗಳು ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗಿನ ಮಾಹಿತಿಯಂತೆ ಖಾಸಗಿ ಬಸ್ಸುಗಳು ಮಂಗಳೂರಿನಲ್ಲಿ ರಸ್ತೆಗಿಳಿದಿಲ್ಲ. ಕೆಎಸ್ಸಾರ್ಟಿಸಿ ಬಸ್ಸುಗಳು ಎಂದಿನಂತೆ ಸಂಚಾರ ನಡೆಸುತ್ತಿವೆ.
ಬೆಳಗ್ಗೆಯೇ ಪಡೀಲಿನಲ್ಲಿ ಟಯರ್ ಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಆಕ್ರೋಶ ಮೆರೆದಿದ್ದರೆ, ಕಂಕನಾಡಿ, ತುಂಬೆ, ಕೋಟೆಕಾರ್ ಗಳಲ್ಲಿ ಬಸ್ಸುಗಳಿಗೆ ಕಲ್ಲು ತೂರಾಟ ನಡೆಸಿದ ಕುರಿತು ವರದಿಗಳು ಲಭಿಸಿವೆ. ತುಂಬೆಯಲ್ಲಿ ಸರಕಾರಿ ಬಸ್ಸಿಗೆ ಬೆಳಗ್ಗೆ ಕಲ್ಲೆಸೆಯಲಾಗಿದ್ದು ಹೆಚ್ಚಿನ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಎಲ್ಲೆಡೆ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಿಣರಾಯಿ ಭೇಟಿ, ಜಿಲ್ಲೆಯಲ್ಲಿ ಹರತಾಳ"