ಸಚಿವ ರೈ ಪ್ರವಾಸ ವಿವರ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಬುಧವಾರದ ಪ್ರವಾಸ ವಿವರ ಹೀಗಿದೆ. ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯಲ್ಲಿ ಜರಗುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯ ಉದ್ಘಾಟನಾ ಸಮಾರಂಭದಲ್ಲಿ ಬೆಳಗ್ಗೆ ೧೦ ಗಂಟೆಗೆ ಭಾಗವಹಿಸುವುದು. ೧೧ ಗಂಟೆಗೆ ಕುಂಬಾರರ ಗುಡಿ  ಕೈಗಾರಿಕಾ ಸಹಕಾರ ಸಂಘ ಪುತ್ತೂರು ಇದರ ಬಿ.ಸಿ.ರೋಡ್ ಶಾಖೆಯ ಉದ್ಘಾಟನಾ ಸಮಾರಂಭ, ೧೧.೩೦ಕ್ಕೆ ಮುಡಿಪು ಜನಶಿಕ್ಷಣ ಕೇಂದ್ರದಲ್ಲಿ ಬಂಟ್ವಾಳ ಸಾಂತ್ವನ ಕೇಂದ್ರದ ಉದ್ಘಾಟನೆ ಹಾಗೂ ನವಸಾಕ್ಷರರ ಜೀವನ ಸಮೃದ್ಧಿ ಕಾರ್ಯಾಗಾರ, ೧೨ಕ್ಕೆ ಮಂಗಳೂರು ಪುರಭವನದಲ್ಲಿ ಜರಗುವ ಪವಿತ್ರ ಬುದ್ಧ ಜಯಂತಿಯ ಉದ್ಘಾಟನಾ ಸಮಾರಂಭ, ಸಂಜೆ ೬ಕ್ಕೆ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ದೇವಸ್ಥಾನ ಗುರುಪುರ ಇದರ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ ೭ಕ್ಕೆ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ನರಿಕೊಂಬು ಇದರ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಎಂದು ಪ್ರಕಟಣೆ ತಿಳಿಸಿದೆ.

Be the first to comment on "ಸಚಿವ ರೈ ಪ್ರವಾಸ ವಿವರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*