ಸೋಮವಾರ, ಮಂಗಳವಾರ ವಿದ್ಯುತ್ ವ್ಯತ್ಯಯ

ಕೈಕಂಬದಲ್ಲಿ ರಸ್ತೆ ಅಗಲಗೊಳಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಬಂಟ್ವಾಳ, ಬಿ.ಸಿ.ರೋಡ್ ಮತ್ತು ಮೇಲ್ಕಾರ್, ಪಾಣೆಮಂಗಳೂರು, ನರಿಕೊಂಬು ಮೊದಲಾದ ಪ್ರದೇಶಕ್ಕೆ ಒಳಪಡುವ ಕಾರಿಂಜೇಶ್ವರ ಫೀಡರ್ ಹಾಗು ಸಿದ್ದಕಟ್ಟೆ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡ ಮಾಡಲಾಗುವುದು ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾರಾಯಣ ಭಟ್ ತಿಳಿಸಿದ್ದಾರೆ. ಇದೇ ಸಂದರ್ಭ ಕಂಬಗಳನ್ನು ನೆಡುವ ಹಿನ್ನೆಲೆಯಲ್ಲಿ ಸೋಮವಾರ ಬಿ.ಸಿ.ರೋಡ್ ಫೀಡರ್ ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ತಿಳಿಸಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ. ವಿಟ್ಲ ಪೇಟೆಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿಸೋಮವಾರ ಹಾಗೂ ಮಂಗಳವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ವಿಟ್ಲಮೆಸ್ಕಾಂ ಉಪವಿಭಾಗದಿಂದ ಹೊರಡುವ ಐದು ಪೀಡರ್‌ಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಳ್ಳಲಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Be the first to comment on "ಸೋಮವಾರ, ಮಂಗಳವಾರ ವಿದ್ಯುತ್ ವ್ಯತ್ಯಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*