ಮಾಜಿ ಸಚಿವ – ಹಾಲಿ ಸಚಿವರ ಭೇಟಿ, ಮಾತುಕತೆ

ರಾಜ್ಯ ನಗರಾಭಿವೃದ್ದಿ ಸಚಿವ ಯು.ಟಿ.ಖಾದರ್ ಅವರು ಭಾನುವಾರ ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಕಳ್ಳಿಗೆಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಇದು ಸೌಜನ್ಯದ ಭೇಟಿಯಾಗಿದ್ದು, ಈ ಸೋಲು ತಾತ್ಕಾಲಿಕವಾಗಿದೆ, ಯಾರು ಕೂಡ ಎದೆಗುಂದದೆ  ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ  ಪಕ್ಷ ವನ್ನು ಸಂಘಟನಾತ್ಮಕವಾಗಿ ಸಂಘಟಿಸಿ ಅಧಿಕಾರಕ್ಕೆ ತರಲು ಎಲ್ಲರೂ ಜೊತೆಯಾಗಿ ಪ್ರಯತ್ನಿಸೋಣ ಎಂದ ಸಚಿವ ಯು.ಟಿ.ಖಾದರ್ ಜಿಲ್ಲೆಯ ಅಭಿವೃದ್ದಿ ದೃಷ್ಟಿಯಿಂದಲೂ ಸಲಹೆ,ಸಹಕಾರವನ್ನು ಯಾಚಿಸಿದರು.

ಬಂಟ್ವಾಳ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ,ಇರಾ ಗ್ರಾಪಂ ಅಧ್ಯಕ್ಷ ಅಬ್ದುಲ್ ರಜಾಕ್ , ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬೇಬಿ ಕುಂದರ್, ಪ್ರಮುಜಖರಾದ ಡೆಂಜಿಲ್ ನೊರಾನ್ಹಾ ಅಲ್ಲಿಪಾದೆ ಮೊದಲಾದವರಿದ್ದರು.

ಬಳಿಕ ಸಚಿವ ಖಾದರ್ ಅವರು,ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಸಚಿವ ಅಭಯಚಂದ್ರ ಜೈನ್,ಮಾಜಿ ಶಾಸಕ ವಸಂತ ಬಂಗೇರ ಅವರ ನಿವಾಸಕ್ಕೂ ಭೇಟಿ ನೀಡಿ ಅವರೊಂದಿಗೆ ಕುಶಲೋಪಚರಿ ನಡೆಸಿದರು.ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಜಿಲ್ಲೆಯ ಅಭಿವೃದ್ದಿ ವಿಚಾರದಲ್ಲಿ ಸಲಹೆ,ಸಹಕಾರವನ್ನು ಕೋರಿದರು.ಈ ವೇಳೆ ವಿಪ ಸದಸ್ಯ ಹರೀಶ್ ಕುಮಾರ್ ಉಪಸ್ಥಿತರಿದ್ದರು.

Be the first to comment on "ಮಾಜಿ ಸಚಿವ – ಹಾಲಿ ಸಚಿವರ ಭೇಟಿ, ಮಾತುಕತೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*