ಶಾಲಾ ಅಸಂಬ್ಲಿಯಲ್ಲಿ ಗ್ರಾಹಕ ಶಿಕ್ಷಣ ನೀಡಿ: ಕ್ಷೇತ್ರ ಶಿಕ್ಷಣಾಧಿಕಾರಿ

ಗ್ರಾಹಕ ಕ್ಲಬ್‌ಗಳ ಮೂಲಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ದೈನಂದಿನ ವ್ಯವಹಾರಗಳಲ್ಲಿ ಆಗುತ್ತಿರುವ ವಂಚನೆಯ ಬಗ್ಗೆ ತಿಳಿಸಿ ಜಾಗೃತಿ ಮೂಡಿಸಬೇಕಾಗಿದೆ. ಶಾಲಾ ಅಸಂಬ್ಲಿಯಲ್ಲಿ ಒಂದೆರಡು ನಿಮಿಷಗಳು ಕ್ಲಬ್‌ನ ಚಟುವಟಿಕೆಗಳನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಗ್ರಾಹಕ ಶಿಕ್ಷಣ ನೀಡುವುದು ಅಗತ್ಯವಾಗಿದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಹೇಳಿದರು.

ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರಲ್ಲಿ ಡಿ. 4ರಂದು ಬಂಟ್ವಾಳ ಲಯನ್ಸ್ ಕ್ಲಬ್ ಮತ್ತು ದ.ಕ ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ವಿದ್ಯಾರ್ಥಿ ಗ್ರಾಹಕ ಶಿಕ್ಷಣ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಜಿಲ್ಲಾ ಗ್ರಾಹಕ ಸಂಘದ ಅಧ್ಯಕ್ಷ ಎಮ್.ಜೆ ಸಾಲ್ಯಾನ್ ಶಿಬಿರವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಹಕರ ಜಾಗೃತಿಯನ್ನುಂಟು ಮಾಡುವುದು ಸರಕಾರದ ಕರ್ತವ್ಯ. ಆದರೆ ಗ್ರಾಹಕ ಸಂಘಟನೆಗಳು ಜಾಗೃತಿ ಮಡಿಸುವ ಕೆಲಸವನ್ನು ಮಾಡುತ್ತಿರುವುದು ಶಾಘ್ಲನೀಯ. ಗ್ರಾಹಕರಿಗೆ ತಿಳುವಳಿಕೆ ಮೂಡಿಸಿದಾಗ ಮಾತ್ರ ಸಾರ್ವಜನಿಕ ಜೀವನದಲ್ಲಿ ಮೋಸಕ್ಕೆ ಒಳಗಾಗುವುದನ್ನು ತಪ್ಪಿಸಬಹುದಾಗಿದೆ. ಜಿಲ್ಲಾ ಗ್ರಾಹಕ ಸಂಘಟನೆಗಳ ಮೂಲಕ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆಸಲಾಗುತ್ತಿದೆ. ಎಲ್ಲಾ ಶಾಲೆಗಳಲ್ಲಿ ಗ್ರಾಹಕ ಕ್ಲಬ್ ರಚನೆಯಾಗಬೇಕು ಎಂದು ತಿಳಿಸಿದರು.

ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಯನ್ಸ್ ಜಿಲ್ಲಾ ಸಂಚಿಕೆಯ ಪ್ರಧಾನ ಸಂಪಾದಕ ದಾಮೋದರ ಬಿ.ಎಮ್. ಮುಖ್ಯ ಅತಿಥಿಯಾಗಿ ಮಾತನಾಡಿ ಶುಭ ಹಾರೈಸಿದರು. ಗ್ರಾಹಕ ಸಂಘದ ಕಾರ್ಯದರ್ಶಿ ವಿಷ್ಣು ಪಿ. ನಾಯಕ್ ಮಾಹಿತಿ ನೀಡಿದರು.

ಗ್ರಾಹಕ ಪತ್ರಿಕೆಯ ಸಂಪಾದಕ ಮಾಹಬಲೇಶ್ವರ ಹೆಬ್ಬಾರ್ ಕಾರ್ಯಕ್ರಮ ನಿರ್ವಹಿಸಿದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ರಾಮಯ್ಯ ಶೆಟ್ಟಿ ಸ್ವಾಗತಿಸಿ ಪರಿಚಯಿಸಿದರು.

Be the first to comment on "ಶಾಲಾ ಅಸಂಬ್ಲಿಯಲ್ಲಿ ಗ್ರಾಹಕ ಶಿಕ್ಷಣ ನೀಡಿ: ಕ್ಷೇತ್ರ ಶಿಕ್ಷಣಾಧಿಕಾರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*