8ರಂದು ಶಂಭೂರು ಹೈಸ್ಕೂಲ್ ವಾರ್ಷಿಕೋತ್ಸವ

ಶಂಭೂರಿನಲ್ಲಿರುವ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆ ವಾರ್ಷಿಕೋತ್ಸವ 8ರಂದು ನಡೆಯಲಿದೆ. ಅಂದು 9.40ಕ್ಕೆ ಫಾದರ್ ಮುಲ್ಲರ್, ವೈದ್ಯಕೀಯ ಕಾಲೇಜು, ಮಂಗಳೂರು ಆಡಳಿತಾಧಿಕಾರಿಗಳಾದ ರೆ. ಫಾ. ಡಾ. ಅಜಿತ್ ಮೆನೇಜಸ್ ಧ್ವಜಾರೋಹಣಗೈಯಲಿದ್ದಾರೆ.

ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಪಂಚಾಯತ್‌ನ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನರಿಕೊಂಬು ಗ್ರಾಮ ಪಂಚಾಯತ್ನ ಸದಸ್ಯರಾದ ಜಯರಾಜ್, ವಿಶಾಲಾಕ್ಷಿ, ಗೀತಾ, ರೋಟರಿ ಕ್ಲಬ್ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್, ಜೇಸಿಐ ನೇತ್ರಾವತಿ ಜೋಡುಮಾರ್ಗ ಅಧ್ಯಕ್ಷರಾದ ಹರ್ಷರಾಜ್.ಸಿ, ಶಾಲಾ ಹಿರಿಯ ವಿದ್ಯಾರ್ಥಿ ಸಂದ ಕಾರ್ಯದರ್ಶಿಯಾದ ರಮೇಶ, ಶೇಡಿಗುರಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಜಗದೀಶ ರೆಂಜೆಮಾರು, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಶೇಡಿಗುರಿ ಅಧ್ಯಕ್ಷರಾದ ಶಾಲಿನಿ ರೆಂಜೆಮಾರು ಭಾಗವಹಿಸಲಿದ್ದಾರೆ.

ಸಂಜೆ ಗಂಟೆ 7.30ಕ್ಕೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವ ಸಂಭ್ರಮದ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನರಿಕೊಂಬು ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಯಶೋಧರ ಕರ್ಬೆಟ್ಟು, ಜಿಲ್ಲಾ ಪಂಚಾಯತ್‌ನ ಸದಸ್ಯರಾದ ಕಮಲಾಕ್ಷಿ ಕೆ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯರಾದ ಗಾಯತ್ರಿ ರವೀಂದ್ರ ಸಫಲ್ಯ, ಮಾಜಿ ಸಚಿವರಾದ ಬಿ. ರಮಾನಾಥ ರೈ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ. ಸೀತಾರಾಮ ರೈ ಸವಣೂರು,ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಸಮನ್ಯಾಧಿಕಾರಿ ರಾಧಾಕೃಷ್ಣ ಭಟ್, ಮಂಗಳೂರು ಆರ್ಕಿಟೆಕ್ಟ್‌ನ ಸನತ್ ಕುಮಾರ್ ಶೆಟ್ಟಿ, ಬಂಟ್ವಾಳ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಪ್ರಕಾಶ್ ಕಾರಂತ್,ಉದ್ಯಮಿ ಪದ್ಮನಾಭ ಮಯ್ಯ, ಪತ್ರಕರ್ತರಾದ ರಾಜಾ ಬಂಟ್ವಾಳ, ಹರೀಶ್ ಮಾಂಬಾಡಿ ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಧೀರಾಜ್ ಭಾಗವಹಿಸಲಿದ್ದಾರೆ. ಎಂದು ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment on "8ರಂದು ಶಂಭೂರು ಹೈಸ್ಕೂಲ್ ವಾರ್ಷಿಕೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*