ಬಂಟ್ವಾಳ: 13ರಂದು ವಿಶ್ವಕರ್ಮ ಕ್ರೀಡೋತ್ಸವ

ಬಂಟ್ವಾಳ: ಇಲ್ಲಿನ ಜೋಡುಮಾರ್ಗ ವಿಶ್ವಕರ್ಮ ಸಮಾಜ ಸೇವಾ ಸಂಘ ಮತ್ತು ವಿಶ್ವಜ್ಯೋತಿ ಮಹಿಳಾ ಮಂಡಳಿ ವತಿಯಿಂದ ಇದೇ 13 ರಂದು ಬಂಟ್ವಾಳ ಎಸ್ವಿಎಸ್ ಕಾಲೇಜಿನ ಕ್ರೀಡಾಂಗಣದಲ್ಲಿ ವಾರ್ಷಿಕ ಕ್ರೀಡೋತ್ಸವ ಏರ್ಪಡಿಸಲಾಗಿದೆ.

ಪುರುಷರ ವಿಭಾಗದಲ್ಲಿ ಲಾಂಗ್ ಜಂಪ್, ಹಗ್ಗಜಗ್ಗಾಟ, ವಾಲಿಬಾಲ್, ಕಬಡ್ಡಿ, ಗುಂಡೆಸೆತ, ಮೂರು ಕಾಲಿನ ಓಟ, ನಿಧಾನ ಬೈಕ್ ರೇಸ್ ಮತ್ತು ಮಹಿಳಾ ವಿಭಾಗದಲ್ಲಿ ಸಂಗೀತ ಕುರ್ಚಿ, ತ್ರೋಬಾಲ್, ಗೋಣಿಚೀಲ ಓಟ, ಲಿಂಬೆ ಚಮಚ ಓಟ, ಲಾಂಗ್ ಜಂಪ್, ವಿಷದ ಚೆಂಡು ಹಾಗೂ ಮಕ್ಕಳ ವಿಭಾಗದಲ್ಲಿ ವಿಕೆಟಿಗೆ ರಿಂಗ್ ಹಾಕುವುದು, ಲಿಂಬೆ ಚಮಚ ಓಟ, ಸಂಗೀತ ಕುರ್ಚಿ, ವಿಷದ ಚೆಂಡು, ಮೂರು ಕಾಲಿನ ಓಟ ಸ್ಪರ್ಧೆ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ಕಟ್ಟಡ ಸಮಿತಿ ಗೌರವಾಧ್ಯಕ್ಷ ಲೋಕೇಶ ಆಚಾರ್ಯ ಪುಂಜಾಲಕಟ್ಟೆ ಕ್ರೀಡೋತ್ಸವ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾರ್ನಬೈಲು, ಗೌರವಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ, ಉದ್ಯಮಿ ಪ್ರಭಾಕರ ಆಚಾರ್ಯ ಫರಂಗಿಪೇಟೆಮಹಿಳಾ ಘಟಕ ಅಧ್ಯಕ್ಷೆ ಪುಷ್ಪಾ ಡಿ.ಆಚಾರ್ಯ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Be the first to comment on "ಬಂಟ್ವಾಳ: 13ರಂದು ವಿಶ್ವಕರ್ಮ ಕ್ರೀಡೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*