ನೇರಳಕಟ್ಟೆ : ಬೈಕ್ ಡಿಕ್ಕಿ ಪಾದಚಾರಿ ಮೃತ್ಯು

ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ನೇರಳಕಟ್ಟೆ ಸಮೀಪದ ಪರ್ಲೋಟು ನಿವಾಸಿ ಬೀಡಿ ಗುತ್ತಿಗೆದಾರ  ಖಾಸೀಂ (68 ) ಸೋಮವಾರ ಬೆಳಿಗ್ಗೆ  ಬೈಕ್ ಡಿಕ್ಕಿಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಸಂಚರಿಸುತ್ತದ್ದ ಬೈಕೊಂದು ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ನೇರಳಕಟ್ಟೆ ಬಸ್ಸು ನಿಲ್ದಾಣ ಎದುರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಸಿಂ ಎಂಬವರಿಗೆ ಸೋಮವಾರ ಬೆಳಿಗ್ಗೆ ಡಿಕ್ಕಿಹೊಡೆದಿತ್ತು. ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟರು.  ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.   ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

Be the first to comment on "ನೇರಳಕಟ್ಟೆ : ಬೈಕ್ ಡಿಕ್ಕಿ ಪಾದಚಾರಿ ಮೃತ್ಯು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*