ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಇಂಟರಾಕ್ಟ್ ಕ್ಲಬ್ ಸನ್ನದು ಪ್ರಧಾನ

ರೋಟರಿ ಸಂಸ್ಥೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಪುನಶ್ಚೇತನ ಮಾಡಲು ವಿವಿಧ ಹಂತಗಳಲ್ಲಿ   ಮಾರ್ಗದರ್ಶನ ಮತ್ತು ಪ್ರತಿಭಾ ಪುರಸ್ಕಾರ ಮಾಡುತ್ತದೆ ಎಂದು ರೋಟರಿ ವಲಯ ಕಾರ್ಯದರ್ಶಿ ನಾರಾಯಣ ಹೆಗ್ಡೆ ಹೇಳಿದರು.

ಅವರು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ  ವತಿಯಿಂದ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಇಂಟರಾಕ್ಟ್ ಕ್ಲಬ್ ಸನ್ನದು ಪ್ರಧಾನ ಮಾಡಿ ಮಾತನಾಡಿದರು.ಸಮಾರಂಭದ ಅಧ್ಯಕ್ಷರಾದ   ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರ ಆಳ್ವ ವಿದ್ಯಾರ್ಥಿಗಳಿಗೆ  ರೋಟರಿ ಅವಕಾಶಗಳ ಸದುಪಯೋಗ ಮಾಡಲು ಕರೆ ನೀಡಿದರು.  ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷರಾದ ಉಮೇಶ್ ನಿರ್ಮಲ್ ಗಣ್ಯರನ್ನು ಸ್ವಾಗತಿಸಿದರು. ವೇದಿಕೆಯಲ್ಲಿ   ಗಣೇಶ್ ಸುವರ್ಣ  ತುಂಬೆ, ಮಹಮ್ಮದ್ ಹನೀಫ್, ಮಹಮ್ಮದ್ ಮುನಿರ್ , ಸವಿತಾ ನಿರ್ಮಲ್ ಉಪಸ್ತಿತರಿದ್ದರು.ಕಾಲೇಜಿನ ಇಂಟರಾಕ್ಟ್  ಸಂಯೋಜಕರಾದ ಆಲ್ವಿನ್ ಸಿಕ್ವೇರಾ ಧನ್ಯವಾದ ಸಲ್ಲಿಸಿದರು.

Be the first to comment on "ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಇಂಟರಾಕ್ಟ್ ಕ್ಲಬ್ ಸನ್ನದು ಪ್ರಧಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*