ಸರಕಾರಿ ಪ್ರೌಢಶಾಲೆ ಸಿದ್ದಕಟ್ಟೆಯಲ್ಲಿ ಬಂಟ್ವಾಳ ರೋಟರಿ ಕ್ಲಬ್ನ ಪ್ರಾಯೋಜಕತ್ವದಲ್ಲಿ ಅಳವಡಿಸಿದ ಸ್ಮಾರ್ಟ್ಕ್ಲಾಸ್ ಉದ್ಘಾಟನೆ ನಡೆಯಿತು. ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಉದ್ಘಾಟಿಸಿ ಮಾತನಾಡಿ, ಸರಕಾರಿ ಶಾಲೆಯೊಂದರಲ್ಲಿ ಎಲ್ಲಾ ತರಗತಿಗೂ ಸ್ಮಾರ್ಟ್ ಕ್ಲಾಸ್ ಅಳವಡಿಸಿಕೊಳ್ಳುವ ಮೂಲಕ ಸಿದ್ದಕಟ್ಟೆ ಸರಕಾರಿ ಪ್ರೌಢಶಾಲೆ ಮಾದರಿಯಾಗಿದೆ. ಇಲ್ಲಿನ ಇಂಟರಾಕ್ಟ್ ಕ್ಲಬ್ ಕೂಡ ಸಕ್ರಿಯವಾಗಿದ್ದು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಸ್ಥಾನ ಗಳಿಸಿರುವುದು ಸಂತಸ ತಂದಿದೆ ಎಂದರು.
ಜಾಹೀರಾತು
ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಉಮೇಶ್ಗೌಡ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಕಾರ್ಯದರ್ಶಿ ಶಿವಾನಿ ಬಾಳಿಗ, ಇಂಟರಾಕ್ಟ್ ಕ್ಲಬ್ ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಮುಕ್ತ ವೇದಿಕೆಯಲ್ಲಿದ್ದರು. ಶಾಲೆಯ ಉಪಪ್ರಾಂಶುಪಾಲ ರಮಾನಂದ ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕ ವಾಸು ವಂದಿಸಿದರು, ಶಿಕ್ಷಕ ಮಹೇಶ್ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಿದ್ಧಕಟ್ಟೆ ಸರ್ಕಾರಿ ಹೈಸ್ಕೂಲಿನಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ"