ತಾಲೂಕಾಡಳಿತ ವತಿಯಿಂದ ಅಂಬೇಡ್ಕರ್ ಜನ್ಮದಿನಾಚರಣೆ

ತಾಲೂಕು ಪಂಚಾಯತ್ ಬಂಟ್ವಾಳ, ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಬಂಟ್ವಾಳ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ ಎಸ್ ವೈ ಸಭಾಂಗಣದಲ್ಲಿ ಭಾನುವಾರ ನಡೆಯಿತು.

ಸಹಾಯಕ ಚುನಾವಣಾಧಿಕಾರಿ ಮಹೇಶ್ ಉದ್ಘಾಟಿಸಿದರು. ಬಿ.ಆರ್ .ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ವಿದ್ಯಾರ್ಥಿಗಳಿಗೆ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಆಗಬೇಕಾಗಿದೆ ಎಂದರು. ಅಧ್ಯಕ್ಷತೆಯನ್ನು ಬಂಟ್ವಾಳ ತಹಶಿಲ್ದಾರ ಸಣ್ಣರಂಗಯ್ಯ ವಹಿಸಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಶಿಕ್ಷಣಾಧಿಕಾರಿ ಶಿವಪ್ರಕಾಶ್, ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ, ಸಿ.ಡಿ.ಪಿ.ಒ ಮಲ್ಲಿಕಾ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಯ ಸಹಾಯಕ ನಿರ್ದೇಶಕ ಕೆ.ಮೋಹನ್ ಕುಮಾರ್ ಸ್ವಾಗತಿಸಿ ಇ.ಒ.ರಾಜಣ್ಣ ವಂದಿಸಿದರು.

Be the first to comment on "ತಾಲೂಕಾಡಳಿತ ವತಿಯಿಂದ ಅಂಬೇಡ್ಕರ್ ಜನ್ಮದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*