ಸಾರಡ್ಕದಲ್ಲಿ ವಾಹನ ತಪಾಸಣೆ ವೇಳೆ ಹಲ್ಲೆ – ದೂರು

ವಿಟ್ಲದ ಸಾರಡ್ಕ ಎಂಬಲ್ಲಿ ಪೊಲೀಸರು ಬೊಲೆರೋ ವಾಹನ ನಿಲ್ಲಿಸಿ ತಪಾಸಣೆ ಮಾಡುತ್ತಿದ್ದಾಗ ಬೈಕ್ ನಲ್ಲಿ ಬಂದ ಆರೋಪಿಗಳು ವಾಹನಕ್ಕೆ ಅಡ್ಡಲಾಗಿ ತಮ್ಮ ವಾಹನ ನಿಲ್ಲಿಸಿ, ಕೈಯಿಂದ, ಮುಷ್ಠಿಯಿಂದ ಹಲ್ಲೆ ನಡೆಸಿದ್ದು, ಪೊಲೀಸರು ತಡೆಯಲು ಯತ್ನಿಸಿದಾಗ ಅವರನ್ನೂ ತಳ್ಳಿ ಹಲ್ಲೆ ಮಾಡಿದ್ದಾಗಿ ವಿಟ್ಲ ಠಾಣೆಯಲ್ಲಿ ಕಲಂ341,323,324,143,147,148 ಜೊತೆಗೆ 149 ಭಾದಂ ಸಂನಂತೆ ಪ್ರಕರಣ ದಾಖಲಾಗಿದೆ.

ಮಂಗಳೂರಿನಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ, ಸ್ನೇಹಿತರಾದ ಪ್ರವೀಣ್, ಯತೀಶ್ ಜೊತೆ ಭರತ್ ಎಂಬವರು ಬೊಲೆರೊದಲ್ಲಿ ಕುಂಬಳೆಯಲ್ಲಿರುವ ಹುಡುಗಿ ಮನೆಗೆ ಕಾರು ಮತ್ತು ಜೀಪಿನಲ್ಲಿ ಹೋಗಿದ್ದು, ಈ ಸಂದರ್ಭ ದ್ವಿಚಕ್ರ ವಾಹನದಲ್ಲಿ ಆರೋಪಿಗಳು ಕಲ್ಲು ಬಿಸಾಡುತ್ತಾ ಹಿಂಬಾಲಿಸಿದ್ದು, ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸತ್ತಿದ್ದ ವೇಳೆ ಹಲ್ಲೆ ನಡೆಸಿ, ಕಲ್ಲೆಸೆದು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Be the first to comment on "ಸಾರಡ್ಕದಲ್ಲಿ ವಾಹನ ತಪಾಸಣೆ ವೇಳೆ ಹಲ್ಲೆ – ದೂರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*