21ರಂದು ನಂದಾವರ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ, ಸೀಯಾಳಾಭಿಷೇಕ

ಬಂಟ್ವಾಳ ತಾಲೂಕಿನ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದಲ್ಲಿ ವರುಣ ದೇವರ ಕೃಪೆಗಾಗಿ ಸಾಮೂಹಿಕ ಪ್ರಾರ್ಥನೆ ಮತ್ತು ಸೀಯಾಳಾಭಿಷೇಕ ಕಾರ್ಯಕ್ರಮ ಮೇ. 21ರಂದು ನಡೆಯಲಿದೆ.

ವರುಣ ದೇವರ ಕೃಪೆಗಾಗಿ ಬೆಳಗ್ಗೆ 11ಕ್ಕೆ ಕಾರ್ಯಕ್ರಮ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಡೆಯುವುದು. ನಾಡಿನಲ್ಲಿ ತೀವ್ರ ಬರಗಾಲದ ಪರಿಸ್ಥಿತಿಯಿದ್ದು ಸಕಲ ಜೀವರಾಶಿಗಳ ಸಂಕಷ್ಟ ನಿವಾರಣೆಗೋಸ್ಕರ ಹಾಗೂ ಉತ್ತಮ ಮಳೆ-ಬೆಳೆ, ಫಲ ಪ್ರಾಪ್ತಿಗಾಗಿ ಮಾಗಣೆಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಾಗೂ ಕ್ಷೇತ್ರದ ಭಕ್ತಾದಿಗಳಿಂದ ಶ್ರೀ ದೇವರಿಗೆ ಸಾಮೂಹಿಕ ಪ್ರಾರ್ಥನೆ ಹಾಗೂ ಸೀಯಾಳಾಭಿಷೇಕ ಇರುವ ಹಿನ್ನೆಲೆಯಲ್ಲಿ ನಾಡಿದ ಕ್ಷೇಮಕ್ಕಾಗಿ ಭಗವದ್ಭಕ್ತರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment on "21ರಂದು ನಂದಾವರ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ, ಸೀಯಾಳಾಭಿಷೇಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*