ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ


ಬಂಟ್ವಾಳ: ಇಲ್ಲಿನ ಬಿ.ಆರ್.ಎಂ.ಪಿ.ಸಿ.ಪಿ. ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಅಂಗವಾಗಿ ವಿವಿಧ  ಕಾರ್‍ಯಕ್ರಮ ನಡೆಯಿತು.

9ನೇ ತರಗತಿಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರಹಸನ, ಗಾಯನ, ನೃತ್ಯ ಮುಂತಾದವುಗಳ ಮೂಲಕ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನಗೊಳಿಸಿ, ಬಾಲಕರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕೆಂಬ ಸಂದೇಶವನ್ನು ಸಾರಿದರು.

ಶಾಲಾ ಪ್ರಿನ್ಸಿಪಾಲ್ ರಮಾಶಂಕರ್ ಸಿ., ಶಿಕ್ಷಕ-ಶಿಕ್ಷಕೇತರ ವೃಂದದವರು ಈ ಕಾರ್‍ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ನಮಿತಾಂಜಲಿ ಮಾರ್ಗದರ್ಶನದಲ್ಲಿ ನಡೆದ ಕಾರ್‍ಯಕ್ರಮವನ್ನು, ವಿದ್ಯಾರ್ಥಿನಿ ಸಿಂಚನಾ ಸಿ. ನಿರ್ವಹಿಸಿದರು.

Be the first to comment on "ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*