ವ್ಯಕ್ತಿಯೊಬ್ಬರು ಹೊಟೇಲ್ನ ಲಾಡ್ಜ್ವೊಂದರಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿ.ರೋಡ್ನಲ್ಲಿ ಮಂಗಳವಾರ ನಡೆದಿದೆ.
ಪುತ್ತೂರು ತಾಲೂಕಿನ ನೆಹರೂನಗರದ ಕಾರ್ಜಲ್ ನಿವಾಸಿ ಹೇಮಂತ್ ರಜನಿ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.
ಜಾಹೀರಾತು
ಇವರು ನಿನ್ನೆ ಬಿ.ಸಿ.ರೋಡಿನ ಹೊಟೇಲ್ನ ಲಾಡ್ಜ್ನಲ್ಲಿ ರೂಂ ಮಾಡಿ ತಂಗಿದ್ದರು. ಮಂಗಳವಾರ ಬೆಳಿಗ್ಗೆ ಸಿಬ್ಬಂದಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನೇಣು ಬಿಗಿದು ಆತ್ಮಹತ್ಯೆ"