ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2020 ಕುರಿತು ಮತದಾರರ ಪಟ್ಟಿಯ ಸೇರ್ಪಡೆ, ತೆಗೆದು ಹಾಕುವಿಕೆ ಹಾಗೂ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದರ ತಾಲೂಕು ಮಟ್ಟದ ಉದ್ಘಾಟನಾ ಕಾರ್ಯಕ್ರಮವು ಬಂಟ್ವಾಳ ತಾಲೂಕು ಆಡಳಿತ ತಾಲೂಕು ಪಂಚಾಯತ್ ಸಹಯೋಗದಲ್ಲಿ ಸೆ. 1ರಂದು ಬೆಳಿಗ್ಗೆ 10ಕ್ಕೆ ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಕೊಠಡಿ ನಂ. 2ರಲ್ಲಿ ನಡೆಯಲಿದೆ. ಸೆ.1ರಿಂದ 30ರವೆರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಕ್ರಮ ಜರಗಿಸುವರು ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸೆ. 1ರಿಂದ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ"