ಎಸ್ಪಿ ಕಚೇರಿಗೆ ಬಂಟ್ವಾಳವೇ ಸೂಕ್ತ – ರಮಾನಾಥ ರೈ

ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿಯ ಕಚೇರಿ ಒಂದು ವೇಳೆ ಸ್ಥಳಾಂತರಗೊಳ್ಳುವುದು ಎಂದಿದ್ದರೆ ಬಂಟ್ವಾಳವೇ ಸೂಕ್ತ ಪ್ರದೇಶ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್ಪಿ ಅವರ ಕಚೇರಿಯು ಪೂತ್ತೂರಿಗೆ ಸ್ಥಳಾಂತರಿಸುವ ಚರ್ಚೆಯಾಗುತ್ತಿವೆ. ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿಗಳಿಗೆ ಬಂಟ್ವಾಳವೇ ಕೇಂದ್ರ ಸ್ಥಾನವಾಗಿದೆ. ಅದಲ್ಲದೆ, ಜನರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕೇಂದ್ರ ಸರಕಾರವು ಇದೀಗ ಜಾರಿಗೆ ತಂದಿರುವ ಮೋಟಾರು ವಾಹನ ಕಾಯಿದೆಯಡಿಯಲ್ಲಿ ವಾಹನಗಳಿಗೆ  ವಿಧಿಸಲಾಗುತಿರುವ ದಂಡದಿಂದ ಜನ ಸಾಮಾನ್ಯರಿಗೆ ಹೊರೆಯಾಗುತ್ತಿವೆ ಎಂದ ಅವರು, ಇದನ್ನು ಸರಳೀಕರಿಸಿಗೊಳಿಸಿ ದಂಡ ಪ್ರಮಾಣವನ್ನು ಇಳಿಕೆ ಮಾಡುವ ನಿಟ್ಟಿನಲ್ಲಿ ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ವಾಹನ ಬಿಡಿಭಾಗಗಳನ್ನು ಆಯಾ ಕಂಪನಿಯಲ್ಲಿ ಖರೀದಿರುವ ಸುತ್ತೊಲೆ ಹೊರಡಿಸಿರುವ ಹಿನ್ನೆಲೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದರಿಂದ ಸ್ಥಳೀಯ ಗ್ಯಾರೇಜ್ ನಲ್ಲಿ ತಯಾರಿಸಿರುವ ವಾಹನಗಳ ಬಿಡಿಭಾಗಗಳಿಗೆ ಬೇಡಿಕೆ ಇಲ್ಲದಂತಾಗುತ್ತದೆ. ಪರಿಣಾಮ ಸಣ್ಣ ಪ್ರಮಾಣ ಗ್ಯಾರೇಜ್ ಗಳು ಮುಚ್ಚುವಂತಹ ಪರಿಸ್ಥಿತಿ ಎದುರಾಗಬಹುದು ಎಂದು ಆತಂಕ‌ ವ್ಯಕ್ತಪಡಿಸಿದರು.
ರಾಜ್ಯ ಹಾಗೂ ಜಿಲ್ಲೆಯಲ್ಲಿ ನೂರಾರು ಭಾಷೆಗಳು ನಶಿಸಿ ಹೋಗಿವೆ. ಇದೇ ರೀತಿ ಹಿಂದಿ ಹೇರಿಕೆ ಮುಂದುರಿದರೆ ರಾಜ್ಯದ ಕನ್ನಡ ಭಾಷೆ ಉಳಿಯಲು ಸಾಧ್ಯವೇ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಮಾಣಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಭೂ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್ ಹಾಜರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಎಸ್ಪಿ ಕಚೇರಿಗೆ ಬಂಟ್ವಾಳವೇ ಸೂಕ್ತ – ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*